ಧರ್ಮೋಪದೇಶಕಾಂಡ 31:14 - ಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿ |