Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:16
44 ತಿಳಿವುಗಳ ಹೋಲಿಕೆ  

ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.


ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.


ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ


ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


ಈ ಇಸ್ರಯೇಲರು ಬಾಳ್ ದೇವತೆಯ ಪ್ರತಿಮೆಗಳನ್ನು ಪೂಜಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.


ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.


ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.


ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು