Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:18 - ಕನ್ನಡ ಸತ್ಯವೇದವು C.L. Bible (BSI)

18 ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡಿಸುವದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗಲೂ ನಾನು ಅವರಿಗೆ ಸಹಾಯ ಮಾಡುವುದಿಲ್ಲ. ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಭಿಸಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಮಾಡಿದ ಎಲ್ಲಾ ದುಷ್ಕೃತ್ಯದ ನಿಮಿತ್ತವೂ, ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತ ಮರೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:18
11 ತಿಳಿವುಗಳ ಹೋಲಿಕೆ  

“ಆದಕಾರಣ ನೀನು ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿಕೊಡು; ಈ ಗೀತೆ ಇಸ್ರಯೇಲರಿಗೆ ವಿರೋಧವಾದ, ನನಗೆ ಪರವಾದ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠ ಮಾಡಿಸು.


“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.


ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು