Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:19 - ಕನ್ನಡ ಸತ್ಯವೇದವು C.L. Bible (BSI)

19 “ಆದಕಾರಣ ನೀನು ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿಕೊಡು; ಈ ಗೀತೆ ಇಸ್ರಯೇಲರಿಗೆ ವಿರೋಧವಾದ, ನನಗೆ ಪರವಾದ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಹೀಗಿರುವುದರಿಂದ ಈಗ ಈ ಹಾಡನ್ನು ಬರೆದುಕೊಳ್ಳಿರಿ. ಇಸ್ರಾಯೇಲರಲ್ಲಿ ಈ ಹಾಡು ನನಗೆ ಸಾಕ್ಷಿಯಾಗಿರುವ ಹಾಗೆ ಅದನ್ನು ಅವರಿಗೆ ಬಾಯಿಪಾಠ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:19
18 ತಿಳಿವುಗಳ ಹೋಲಿಕೆ  

ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗು; ಅಲ್ಲಿ ಈ ಮಾತುಗಳನ್ನು ಅವನಿಗೆ ಹೇಳು,” ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.


ಆಗ ಮೋಶೆ ಇಸ್ರಯೇಲರ ಸರ್ವಸಮೂಹಕ್ಕೆ ಕೇಳಿಸುವಂತೆ ಈ ಗೀತಾವಚನಗಳನ್ನು ಹೇಳಿದನು:


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.


ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು