Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:2 - ಕನ್ನಡ ಸತ್ಯವೇದವು C.L. Bible (BSI)

2 “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅವರಿಗೆ - ನಾನು ಈಗ ನೂರಿಪ್ಪತ್ತು ವರುಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವದು ಇನ್ನು ನನ್ನಿಂದಾಗದು; ಯೆಹೋವನು ನನಗೆ - ನೀನು ಈ ಯೊರ್ದನ್ ಹೊಳೆಯನ್ನು ದಾಟಕೂಡದೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಈ ಹೊತ್ತು ನೂರ ಇಪ್ಪತ್ತು ವರ್ಷದವನಾಗಿದ್ದೇನೆ. ಇನ್ನು ಮುಂದೆ ನಿಮ್ಮನ್ನು ಮುನ್ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಇದಲ್ಲದೆ ಯೆಹೋವ ದೇವರು ನನಗೆ, ‘ನೀನು ಈ ಯೊರ್ದನನ್ನು ದಾಟುವುದಿಲ್ಲ,’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:2
17 ತಿಳಿವುಗಳ ಹೋಲಿಕೆ  

ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


“ಮೋಶೆಗೆ ನಲವತ್ತು ವರ್ಷ ವಯಸ್ಸು ಆಗಿದ್ದಾಗ ಅವನು ತನ್ನ ಸೋದರ ಇಸ್ರಯೇಲರನ್ನು ಸಂದರ್ಶಿಸಲು ಇಷ್ಟಪಟ್ಟು ಹೊರಟನು.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;


ಮೋಶೆ ಹೋಗಿ ಇಸ್ರಯೇಲರೆಲ್ಲರಿಗೆ ಈ ಮಾತುಗಳನ್ನು ತಿಳಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು