Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:20 - ಕನ್ನಡ ಸತ್ಯವೇದವು C.L. Bible (BSI)

20-21 ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20-21 ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:20
26 ತಿಳಿವುಗಳ ಹೋಲಿಕೆ  

ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?


“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು