Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:28 - ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರೋಧವಾಗಿ ಸಾಕ್ಷಿಗಳಾಗುವದಕ್ಕೆ ಭೂಮ್ಯಾಕಾಶಗಳನ್ನು ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:28
13 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.


ಭೂಮ್ಯಾಕಾಶಗಳನು ಕರೆಯುತಿಹನು I ಪ್ರಜೆಗೆ ವಿಧಿಪಾ ತೀರ್ಪನು ನೋಡಲೆಂದು II


ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು