Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:6
44 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.


ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


“ಅದಕ್ಕೆ ನಾನು, ‘ಕಳವಳಪಡಬೇಡಿ, ಅವರಿಗೆ ಭಯಪಡಬೇಡಿ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅಸ್ಸೀರಿಯದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಸೈನ್ಯಕ್ಕೂ ಅಂಜಬೇಡಿ, ಕಳವಳಪಡಬೇಡಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯ ದೊಡ್ಡದು.


ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು.


“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;


ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಬೆನ್ಯಾಮೀನ್ ಕುಲದ ರಾಫೂವನ ಮಗ ಪಲ್ಟೀ


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು