Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:7 - ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:7
18 ತಿಳಿವುಗಳ ಹೋಲಿಕೆ  

ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.


“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.


ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು