Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:8 - ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:8
25 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ಬೆನ್ಯಾಮೀನ್ ಕುಲದ ರಾಫೂವನ ಮಗ ಪಲ್ಟೀ


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು