Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:10 - ಕನ್ನಡ ಸತ್ಯವೇದವು C.L. Bible (BSI)

10 ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಅವರನ್ನು ಶೂನ್ಯವೂ ಭಯಂಕರವೂ ಆಗಿರುವ ಮರಳುಕಾಡಿನಲ್ಲಿ ಕಂಡು ಪರಾಮರಿಸಿ ಪ್ರೀತಿಯಿಂದ ಆವರಿಸಿಕೊಂಡು ಕಣ್ಣುಗುಡ್ಡಿನಂತೆ ಕಾಪಾಡಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:10
25 ತಿಳಿವುಗಳ ಹೋಲಿಕೆ  

ಬೆಂಗಾಡಿನಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಕಾಪಾಡಿದವನು ನಾನೇ.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.


ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.


ದೇವರ ಚಿತ್ತವನ್ನು ಅರಿತಿರುವುದಾಗಿ ನೆನೆಸುತ್ತೀಯೆ: ಉತ್ತಮವಾದುದನ್ನು ಆರಿಸಿಕೊಳ್ಳಲು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ಹೇಳಿಕೊಳ್ಳುತ್ತೀಯೆ;


ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


“ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.


ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ.


ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು.


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡವೂ ವಾದಿಸುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.


ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು