Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:11 - ಕನ್ನಡ ಸತ್ಯವೇದವು C.L. Bible (BSI)

11 ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:11
13 ತಿಳಿವುಗಳ ಹೋಲಿಕೆ  

'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.


ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.”


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು