15 “ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;
15 ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.
ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.
ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’
ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?
ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.
ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !
ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.
ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.
ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?
ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.