Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:20 - ಕನ್ನಡ ಸತ್ಯವೇದವು C.L. Bible (BSI)

20 ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು - ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಮಾಡದವರೂ ದ್ರೋಹಿಗಳಾದ ಮಕ್ಕಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:20
25 ತಿಳಿವುಗಳ ಹೋಲಿಕೆ  

ಅವರಾದರೋ ದ್ರೋಹಿಗಳು, ಮಕ್ಕಳೆನಿಸಿಕೊಳ್ಳಲು ಅಯೋಗ್ಯರು ವಕ್ರಬುದ್ಧಿಯುಳ್ಳವರು, ಮೂರ್ಖಜಾತಿಯವರು.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು