Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:21 - ಕನ್ನಡ ಸತ್ಯವೇದವು C.L. Bible (BSI)

21 ‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:21
31 ತಿಳಿವುಗಳ ಹೋಲಿಕೆ  

ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”


ಹೋಶೇಯನ ಗ್ರಂಥದಲ್ಲಿ ದೇವರೇ ಹೀಗೆ ಹೇಳಿದ್ದಾರೆ: “ನನ್ನ ಜನರಲ್ಲದವರನ್ನು ನನ್ನ ಜನರೆಂದು ಕರೆಯುವೆನು. ನನಗೆ ಪ್ರಿಯವಲ್ಲದ ನಾಡನ್ನು ನನ್ನ ಪ್ರಿಯತಮೆ ಎಂದು ಕರೆಯುವೆನು.”


ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು.


ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.


ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು