Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:22 - ಕನ್ನಡ ಸತ್ಯವೇದವು C.L. Bible (BSI)

22 ‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:22
42 ತಿಳಿವುಗಳ ಹೋಲಿಕೆ  

ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II


ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II


ಕಾಡುಮೇಡನು ಸುಡುವಾ ಬೆಂಕಿಯಂತೆ I ಪರ್ವತವನೆ ಉರಿಸುವ ಜ್ವಾಲೆಯಂತೆ II


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.


ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು