Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:26 - ಕನ್ನಡ ಸತ್ಯವೇದವು C.L. Bible (BSI)

26 ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:26
13 ತಿಳಿವುಗಳ ಹೋಲಿಕೆ  

“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಅನ್ಯಜನಗಳಲ್ಲಿ ಚದರಿಹೋಗಿ ಕಣ್ಮರೆಯಾಗುವಿರಿ. ಶತ್ರುಗಳ ದೇಶ ನಿಮ್ಮನ್ನು ಕಬಳಿಸಿಬಿಡುವುದು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು