Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:27 - ಕನ್ನಡ ಸತ್ಯವೇದವು C.L. Bible (BSI)

27 ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:27
24 ತಿಳಿವುಗಳ ಹೋಲಿಕೆ  

ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ I ಅವರಾಡುವ ಕೇಡು ಅವರ ತಲೆಯ ಮೇಲೇ ಎರಗಲಿ II


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು