Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:28 - ಕನ್ನಡ ಸತ್ಯವೇದವು C.L. Bible (BSI)

28 “ಆಲೋಚನೆಯಿಲ್ಲದ ಜನರಿವರು ಸ್ವಲ್ಪವಾದರೂ ವಿವೇಕವಿಲ್ಲದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಆಲೋಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇಸ್ರೇಲರು ಬುದ್ಧಿಹೀನರಾಗಿದ್ದಾರೆ; ಅವರಿಗೇನೂ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ. ಅವರಲ್ಲಿ ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:28
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು