Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:29 - ಕನ್ನಡ ಸತ್ಯವೇದವು C.L. Bible (BSI)

29 ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:29
18 ತಿಳಿವುಗಳ ಹೋಲಿಕೆ  

“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.


ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು