ಧರ್ಮೋಪದೇಶಕಾಂಡ 32:30 - ಕನ್ನಡ ಸತ್ಯವೇದವು C.L. Bible (BSI)30 ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ಅಧ್ಯಾಯವನ್ನು ನೋಡಿ |