Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:32 - ಕನ್ನಡ ಸತ್ಯವೇದವು C.L. Bible (BSI)

32 ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಾಗಿದ್ದಾರೆ; ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ಹಣ್ಣಿನ ಗೊಂಚಲು ವಿಷ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:32
11 ತಿಳಿವುಗಳ ಹೋಲಿಕೆ  

“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ.


ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು