Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:37 - ಕನ್ನಡ ಸತ್ಯವೇದವು C.L. Bible (BSI)

37 ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:37
8 ತಿಳಿವುಗಳ ಹೋಲಿಕೆ  

“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು