Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:42 - ಕನ್ನಡ ಸತ್ಯವೇದವು C.L. Bible (BSI)

42 ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನನ್ನ ಬಾಣಗಳು ರಕ್ತವನ್ನು ಕುಡಿಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚಂಡಾಡುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:42
16 ತಿಳಿವುಗಳ ಹೋಲಿಕೆ  

‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.


ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ಹಿಂದಿರುಗುತ್ತಿರಲಿಲ್ಲ ಸೌಲನಾಕತ್ತಿ ವ್ಯರ್ಥವಾಗಿ, ಬರುತ್ತಿರಲಿಲ್ಲ ಯೋನಾತಾನನಾ ಬಿಲ್ಲು ಬರಿದಾಗಿ, ಹತರಾದವರ ರಕುತವನು ಹೀರದೆ ಪರಾಕ್ರಮಿಗಳ ಕೊಬ್ಬನು ರುಚಿಸದೆ.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು