Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:43 - ಕನ್ನಡ ಸತ್ಯವೇದವು C.L. Bible (BSI)

43 “ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:43
40 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.


ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು