Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:46 - ಕನ್ನಡ ಸತ್ಯವೇದವು C.L. Bible (BSI)

46 “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:46
15 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


“ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಮೋಶೆ ಈ ಮಾತುಗಳನ್ನೆಲ್ಲ ಇಸ್ರಯೇಲರಿಗೆ ಹೇಳಿ ಮುಗಿಸಿದನಂತರ ಅವರಿಗೆ,


ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.


ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.


ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು