Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:1 - ಕನ್ನಡ ಸತ್ಯವೇದವು C.L. Bible (BSI)

1 ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:1
20 ತಿಳಿವುಗಳ ಹೋಲಿಕೆ  

ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು.


ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು