Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:10 - ಕನ್ನಡ ಸತ್ಯವೇದವು C.L. Bible (BSI)

10 ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:10
37 ತಿಳಿವುಗಳ ಹೋಲಿಕೆ  

ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಯೇಲರೆಲ್ಲರಿಗೆ,


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - “ನೀನು ಯಾಜಕರ ಬಳಿಗೆ ಹೋಗು.


ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಪ್ರತಿಷ್ಠಿತ ಮಾಂಸವನ್ನು ಕಟ್ಟಿಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ, ಅನ್ನವನ್ನಾಗಲಿ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ ಅಥವಾ ಯಾವ ಆಹಾರ ಪದಾರ್ಥವನ್ನೇ ಆಗಲಿ ಸೋಕಿದರೆ ಅದು ಪವಿತ್ರವಾಗುತ್ತದೋ? ಎಂದು ಧರ್ಮವಿಧಿಯನ್ನು ವಿಚಾರಿಸು.” ಪ್ರವಾದಿ ಹಾಗೆ ವಿಚಾರಿಸಲು ಯಾಜಕರು ‘ಇಲ್ಲ’ ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು