Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. ಅವನ ಕೈಕೆಲಸವನ್ನು ಅಂಗೀಕರಿಸಿರಿ. ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:11
18 ತಿಳಿವುಗಳ ಹೋಲಿಕೆ  

ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


“ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು