Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:16 - ಕನ್ನಡ ಸತ್ಯವೇದವು C.L. Bible (BSI)

16 ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಭೂವಿುಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ [ಹೋರೇಬ್‍ಬೆಟ್ಟದಲ್ಲಿನ] ಮುಳ್ಳುಗಿಡದಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಕುಲದವರ ಶಿರಸ್ಸಿನ ಮೇಲೆ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:16
22 ತಿಳಿವುಗಳ ಹೋಲಿಕೆ  

“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II


ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II


ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.


ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.


ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.


ಆಕೆ ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆತ್ತಳು. ಅದು ಅತಿ ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು.


ಜೋಸೆಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯಿಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು