Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:17 - ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:17
27 ತಿಳಿವುಗಳ ಹೋಲಿಕೆ  

ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಜಿಗಿಯುವುದು ಲೆಬನೋನ್ ಪರ್ವತ ಎಳೆಗರುವಿನಂತೆ I ನೆಗೆಯುವುದು ಗಿರಿ ಸಿಯೋನ್ ಕಾಡೆಮ್ಮೆಯ ಕರುವಂತೆ II


ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II


ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;


ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ : 32,500: ಇದೇ ಜೋಸೆಫ್ ವಂಶದ ಕುಟುಂಬಗಳ ವಿವರ.


ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ : 52,700:


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.


ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.


ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


ಪೂರ್ವದಲ್ಲಿದ್ದ ಮನಸ್ಸೆ ಜನಾಂಗದವರು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಪರ್ವತದವರೆಗಿನ ಬಾಷಾನಿನ ಪ್ರದೇಶದಲ್ಲಿ ನೆಲೆಸಿದರು. ಅವರ ಜನಸಂಖ್ಯೆ ಹೆಚ್ಚು ವೃದ್ಧಿಗೊಂಡಿತು.


ಪಶ್ಚಿಮದಲ್ಲಿ ಮನಸ್ಸೆ ಕುಲದಿಂದ 18,000 ಮಂದಿ ದಾವೀದನ ಪಟ್ಟಾಭಿಷೇಕದಲ್ಲಿ ಭಾಗಿಗಳಾಗಲು ಆಯ್ಕೆಯಾದವರು;


ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು