Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:19 - ಕನ್ನಡ ಸತ್ಯವೇದವು C.L. Bible (BSI)

19 ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಉಸುಬಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:19
18 ತಿಳಿವುಗಳ ಹೋಲಿಕೆ  

ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II


ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು