Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:2
24 ತಿಳಿವುಗಳ ಹೋಲಿಕೆ  

ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ದೇವದೂತರ ಮೂಲಕ ಧರ್ಮಶಾಸ್ತ್ರವನ್ನು ಪಡೆದ ನೀವೇ ಅದಕ್ಕೆ ಅವಿಧೇಯರಾಗಿ ನಡೆದಿರಿ,” ಎಂದನು.


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,


ಏಕೆಂದರೆ, ಈ ಬೆಟ್ಟವನ್ನು ಮುಟ್ಟುವ ಯಾರೇ ಆಗಲಿ, ಯಾವ ಪ್ರಾಣಿಯೇ ಆಗಲಿ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಎಂಬ ಆಜ್ಞೆಯನ್ನು ಅವರು ಸಹಿಸಲಾರದೆಹೋದರು.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.


“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.


ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:


ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು