Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:21 - ಕನ್ನಡ ಸತ್ಯವೇದವು C.L. Bible (BSI)

21 ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವಾಸ್ತ್ಯವು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲ್ಯರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:21
8 ತಿಳಿವುಗಳ ಹೋಲಿಕೆ  

ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;


ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು