Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:23 - ಕನ್ನಡ ಸತ್ಯವೇದವು C.L. Bible (BSI)

23 ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಫ್ತಾಲಿಕುಲದ ವಿಷಯದಲ್ಲಿ ಹೀಗಂದನು - ನಫ್ತಾಲಿಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತವಾದಿ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. [ಕಿನ್ನೆರೆತ್] ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:23
10 ತಿಳಿವುಗಳ ಹೋಲಿಕೆ  

ನಫ್ತಾಲಿ ಸ್ವಚ್ಛಂದ ಜಿಂಕೆಮರಿಯಂತೆ ಸಿಗುವುದವನಲಿ ಸುಮಧುರವಾದ ಮಾತುಕತೆ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.


ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು