Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:25 - ಕನ್ನಡ ಸತ್ಯವೇದವು C.L. Bible (BSI)

25 ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮ್ಮ ಕೋಟೆಯ ಬಾಗಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರುವವು; ನೀವು ಇರುವವರೆಗೂ ನಿಮಗೆ ಬಲವು ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ. ನಿನ್ನ ಜೀವಮಾನಕಾಲವೆಲ್ಲಾ ನಿನಗೆ ಬಲವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:25
18 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.


ಆಶೇರನಗಿರುವುದು ಸಮೃದ್ಧಿಯಾಗಿ ಧಾನ್ಯ ದೊರಕುವುದವನಲಿ ರಾಜನಿಗೂ ತಕ್ಕ ಭಕ್ಷ್ಯ.


ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II


ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು