Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:3 - ಕನ್ನಡ ಸತ್ಯವೇದವು C.L. Bible (BSI)

3 ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:3
31 ತಿಳಿವುಗಳ ಹೋಲಿಕೆ  

ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.


“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II


ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು