ಧರ್ಮೋಪದೇಶಕಾಂಡ 33:9 - ಕನ್ನಡ ಸತ್ಯವೇದವು C.L. Bible (BSI)9 ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ. ಅಧ್ಯಾಯವನ್ನು ನೋಡಿ |
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.