ಧರ್ಮೋಪದೇಶಕಾಂಡ 34:11 - ಕನ್ನಡ ಸತ್ಯವೇದವು C.L. Bible (BSI)11 ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ಐಗುಪ್ತ ದೇಶದಲ್ಲಿ ಫರೋಹನ ಮುಂದೆಯೂ ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಯೆಹೋವನು ಅವನನ್ನು ಕಳುಹಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು. ಅಧ್ಯಾಯವನ್ನು ನೋಡಿ |