Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:8 - ಕನ್ನಡ ಸತ್ಯವೇದವು C.L. Bible (BSI)

8 ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರು ಮೋಶೆಗೋಸ್ಕರ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:8
9 ತಿಳಿವುಗಳ ಹೋಲಿಕೆ  

ಪದ್ಧತಿಯ ಪ್ರಕಾರ ನಲವತ್ತು ದಿನಗಳು ಸುಗಂಧ ದ್ರವ್ಯಗಳನ್ನು ಲೇಪಿಸಬೇಕಾಗಿತ್ತು. ಅಷ್ಟು ದಿನಗಳವರೆಗೂ ಅವನಿಗೋಸ್ಕರ ಈಜಿಪ್ಟಿನವರಿಂದ ಶೋಕಾಚರಣೆ ಇತ್ತು.


ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.


ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು