ಧರ್ಮೋಪದೇಶಕಾಂಡ 4:12 - ಕನ್ನಡ ಸತ್ಯವೇದವು C.L. Bible (BSI)12 ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದ್ದೂ; ಮಾತಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸದೆ ಹೋದದ್ದೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ. ಅಧ್ಯಾಯವನ್ನು ನೋಡಿ |