Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:19 - ಕನ್ನಡ ಸತ್ಯವೇದವು C.L. Bible (BSI)

19 ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:19
30 ತಿಳಿವುಗಳ ಹೋಲಿಕೆ  

ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.


ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.


ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪದಲ್ಲಾಗಲಿ, ಭೂಮಿಯ ಕೆಳಗಣ ಮೀನಿನ ರೂಪದಲ್ಲಾಗಲಿ ದೇವರ ಸ್ವರೂಪವೆಂದು ವಿಗ್ರಹಗಳನ್ನು ಮಾಡಿಕೊಳ್ಳಬೇಡಿ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ I ಅವುಗಳ ಸ್ವರವಂತೂ ಕೇಳಿಬರುವುದಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು