Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:2 - ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:2
21 ತಿಳಿವುಗಳ ಹೋಲಿಕೆ  

ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನೀವು ನದಿದಾಟಿ ಸ್ವಾಧೀನಮಾಡಿಕೊಳ್ಳುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಅಂದೇ ನನಗೆ ಆಜ್ಞಾಪಿಸಿದರು.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ಯಕೋಬ ಸಂತತಿಯಾದ ನಮಗೆ ಇತ್ತನು ಮೋಶೆ ಧರ್ಮಶಾಸ್ತ್ರವನ್ನು ಸೊತ್ತಾಗಿ


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


“ನಿಮ್ಮ ಮಧ್ಯೆ ಯಾವ ಪ್ರವಾದಿಯೆ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು