ಧರ್ಮೋಪದೇಶಕಾಂಡ 4:20 - ಕನ್ನಡ ಸತ್ಯವೇದವು C.L. Bible (BSI)20 ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು. ಅಧ್ಯಾಯವನ್ನು ನೋಡಿ |