Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:24 - ಕನ್ನಡ ಸತ್ಯವೇದವು C.L. Bible (BSI)

24 ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:24
28 ತಿಳಿವುಗಳ ಹೋಲಿಕೆ  

ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಸರ್ವೇಶ್ವರನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಯೇಲರಿಗೆ ಕಾಣಿಸಿತು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


“ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು