ಧರ್ಮೋಪದೇಶಕಾಂಡ 4:26 - ಕನ್ನಡ ಸತ್ಯವೇದವು C.L. Bible (BSI)26 ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ. ಅಧ್ಯಾಯವನ್ನು ನೋಡಿ |