Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:28 - ಕನ್ನಡ ಸತ್ಯವೇದವು C.L. Bible (BSI)

28 ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:28
22 ತಿಳಿವುಗಳ ಹೋಲಿಕೆ  

“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.


ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ.


‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ.


ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.


ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.


ಆದರೆ ಅವರು ಅದನ್ನು ಲಕ್ಷಿಸದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ವಿಗ್ರಹಾರಾಧಕರೆಲ್ಲರೂ ಆಶಾಭಂಗಪಡುವರು. ಅದನ್ನು ಕೆತ್ತಿದವರು ಕೇವಲ ಮನುಷ್ಯ ಮಾತ್ರರು. ಅವರೆಲ್ಲರು ಇಲ್ಲಿಗೆ ಕೂಡಿಬರಲಿ; ನಿಶ್ಚಯವಾಗಿ ಅವರು ಹೆದರಿ ಲಜ್ಜೆಪಡುವರು.


ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು