Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:3 - ಕನ್ನಡ ಸತ್ಯವೇದವು C.L. Bible (BSI)

3 ಪೆಗೋರದ ಬಾಳ್ ದೇವತೆಯ ವಿಷಯದಲ್ಲಿ ಸರ್ವೇಶ್ವರ ಮಾಡಿದ ಕಾರ್ಯವನ್ನು ನೀವು ನೋಡಿದ್ದೀರಷ್ಟೆ; ಆ ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆಯಿಂದ ನಾಶಮಾಡಿದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ನೋಡೇ ಇದ್ದೀರಷ್ಟೆ; ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:3
9 ತಿಳಿವುಗಳ ಹೋಲಿಕೆ  

ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.


ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?


ಮೋಶೆ ಮತ್ತು ಯಾಜಕ ಆರೋನನು ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರ ಜನಗಣತಿ ಮಾಡಿದಾಗ ಎಣಿಕೆಯಾದವರಲ್ಲಿ ಒಬ್ಬರಾದರೂ ಇವರಲ್ಲಿರಲಿಲ್ಲ.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;


ಸರ್ವೇಶ್ವರ ನಡೆಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು