Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:30 - ಕನ್ನಡ ಸತ್ಯವೇದವು C.L. Bible (BSI)

30 ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:30
31 ತಿಳಿವುಗಳ ಹೋಲಿಕೆ  

ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯಕ್ಕೆ ಮರಳಿಬಂದು ನಾನು ಈಗ ನಿಮಗೆ ಬೋಧಿಸುವ ಅವರ ಮಾತುಗಳಿಗೆ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾಗಬೇಕು;


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು