ಧರ್ಮೋಪದೇಶಕಾಂಡ 4:31 - ಕನ್ನಡ ಸತ್ಯವೇದವು C.L. Bible (BSI)31 ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.